ಇನ್ನುಮುಂದೆ ಆಸ್ತಿ ನೊಂದಣಿಗೆ ಕಛೇರಿಗೆ ತಿರುಗಾಡಬೇಕಿಲ್ಲ! ಮನೆಯಿಂದಲೇ ಆಸ್ತಿ ನೊಂದಣಿ ಮಾಡಬಹುದು! ಕೃಷ್ಣ ಬೈರೇಗೌಡ ಹೇಳಿಕೆ!
ಈ ಮೊದಲು ನೀವೆಲ್ಲಾ ಆಸ್ತಿ ನೊಂದಣಿ ಮಾಡಬೇಕೆಂದರೆ ನೊಂದಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಬೇಕಿತ್ತು. ಅದು ಕೇವಲ ಒಂದು ಬಾರಿ ಮಾತ್ರವಲ್ಲ. ಹಲವಾರು ಬಾರಿ ಅಲೆದಾಡಬೇಕಿತ್ತು.
ಅಷ್ಟೇ ಅಲ್ಲದೇ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಇದರಿಂದ ಸಾವ೯ಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿತ್ತು. ಆದರೂ ಆಸ್ತಿ ವಿಷಯ ಎಂದಮೇಲೆ ಕಷ್ಟವಾದರೂ ಅಲೆದಾಡುತ್ತಿದ್ದರು. ಒಂದೇ ಬಾರಿಗೆ ಕೆಲಸವೂ ಆಗುತ್ತಿರಲಿಲ್ಲ. ಹೀಗಾಗಿ ಸರಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು.
ಹೀಗೆ ಸಾವ೯ಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪದೇ ಪದೇ ಕಛೇರಿಗೆ ಬರುತ್ತಿದ್ದರೆ ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ಸಕಾ೯ರ ಹೊಸ ಕಾಯಿದೆ ಜ೨ರಿಗೆ ತರಲು ಮುಂದಾಗಿದೆ. ಹೌದು ಇನ್ನು ಮುಂದೆ ಆಸ್ತಿಯ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ
ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ನಂಬಲಾರ್ಹ ಮೂಲಗಳ ಸಹಾಯದಿಂದ ನಾಗರಿಕರು ತಾಂತ್ರಿಕವಾಗಿಯೆ ಆಸ್ತಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ‘ನೋಂದಣಿ(ಕರ್ನಾಟಕ ತಿದ್ದುಪಡಿ) ವಿಧೇಯಕ-2024’ಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಆಸ್ತಿ ನೊಂದಣಿ ಕಾಯಿದೆಯಲ್ಲಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ಇದ್ದರೂ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ
ಈ ವಿಧೇಯಕದಿಂದ ನೋಂದಣಿ ಪ್ರಕ್ರಿಯೆಯಲ್ಲಿ ಸಾವ೯ಜನಿಕರಿಗೆ ಆಸ್ತಿ ನೊಂದಣಿ ಕೆಲಸವು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಮುಲಕ ಮನೆಬಾಗಿಲಿಗೆ ಸಕಾ೯ರಿ ಸೇವೆ ಎಂಬ ವಾಕ್ಯದಂತೆ ಸಾವ೯ಜನಿಕರ ಮನೆಬಾಗಿಲಿಗೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ನಂಬಲಾರ್ಹ ಮೂಲಗಳ ಸಹಾಯದಿಂದ ಸಾವ೯ಜನಿಕರು ತಾಂತ್ರಿಕವಾಗಿಯೇ ಆಸ್ತಿ ನೋಂದಣಿ ಮಾಡಿಕೊಳ್ಳುವ ಈ ಹೊಸ ಮಾದರಿ ಈಗಾಗಲೆ ಮಹಾರಾಷ್ಟ್ರದಲ್ಲಿ ಜಾರಿಯಲ್ಲಿದ್ದು, ಯಶಸ್ವಿಯಾಗಿದೆ. ಆದ್ದರಿಂದ ಕರ್ನಾಟಕದಲ್ಲೂ ಕೂಡ ಇದೇ ಮಾದರಿ ಜಾರಿಗೆ ತಂದರೆ ಜನರಿಗೆ ಉತ್ತಮ ಆಡಳಿತ ನೀಡಲು ಇದು ಸಹಕಾರಿಯಾಗಲಿದೆ ಆದ್ದರಿಂದ ಈ ಮಾದರಿಯನ್ನು ವಿಧೇಯಕದ ಮೂಲಕ ಅಂಗೀಕರಿಸಲಾಗಿದ್ದು, ಇನ್ನು ಮುಂದೆ ಸಾವ೯ಜನಿಕರು ಸುಲಭವಾಗಿ ಆಸ್ತಿ ನೊಂದಣಿ ಮಾಡಿಕೊಳ್ಳಬಹುದು ಎಂದು ಕೃಷ್ಣ ಬೈರೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮುಂದೆ ನಡೆಯಲ್ಲ ಪೇಪರ್ ಖಾತಾ ನೋಂದಣಿ!
ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದ್ದು, ಇದರೊಂದಿಗೆ ಹೆಚ್ಚಿನ ಹಣ ಸೋರಿಕೆಯು ಆಗುತ್ತದೆ. ಆದ್ದರಿಂದ ಇದನ್ನು ತಡೆಯುವ ಸಲುವಾಗಿ ಈ ವಿಧೇಯಕದಲ್ಲಿ ಪೇಪರ್ ಖಾತಾ ನೋಂದಣಿಗೆ ತಡೆಯೊಡ್ಡಲು ತಿದ್ದುಪಡಿ ಮಾಡಲಾಗಿದೆ.
ನಗರ ಭಾಗದಲ್ಲಿ ಇನ್ನು ಪೇಪರ್ ಖಾತಾ ಮೂಲಕವೂ ನೋಂದಣಿ ನಡೆಸಲಾಗುತ್ತಿದ್ದು, ಅನೇಕ ಪ್ರಕರಣಗಳಲ್ಲಿ ನಕಲಿ ಪೇಪರ್ ಖಾತಾ ಬಳಸಿ ನೋಂದಣಿ ಮಾಡುತ್ತಿರುವುದು ತಿಳಿದುಬಂದಿದೆ ಇದರಿಂದ ಸಾವ೯ಜನಿಕರಿಗೆ ಮೋಸವಾಗುತ್ತಿದ್ದು, ಸಕಾ೯ರಕ್ಕೂ ನಷ್ಟವಾಗುತ್ತಿದೆ. ಆದ್ದರಿಂದ ಇದನ್ನು ತಡೆಯಲು ಪೇಪರ್ ಖಾತಾ ನೊಂದಣಿಯನ್ನು ಇನ್ನು ಮುಂದೆ ಬಂದ್ ಮಾಡಲಾಗುವುದು ಎಂದು ಅವರು ಹೇಳಿದರು.
ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸಕಾ೯ರವಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೆವಿನ್ಯೂ ಲೇಔಟ್‌ಗಳಲ್ಲಿ ಮೂಲ ಮಾರ್ಗಸೂಚಿ ದರವನ್ನೇ ಇಳಿಸಿ ನೋಂದಣಿ ಮಾಡಲಾಗಿತ್ತು. ಇದರಿಂದಾಗಿ ಸರಕಾರಕ್ಕೆ 400 ಕೋಟಿ ರೂ. ನಷ್ಟ ಉಂಟಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಿದ್ದರಾಮಯ್ಯ 28 ಜನ ಉಪನೋಂದಣಾಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶಿಸಿದ್ದರು. ಆದರೆ, ವಿಚಾರಣೆ ನಡೆಸಿದ್ದ ಸಮಿತಿ, ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲವೆಂದು ತಿಳಿಸಿತ್ತು. ಹಾಗಾಗಿ ಎಲ್ಲ 28 ಜನ ಉಪ ನೋಂದಣಾಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಆದರೆ ಸಕಾ೯ರಕ್ಕೆ ಮಾತ್ರ ತುಂಬಾ ನಷ್ಟವಾಯಿತು.
ಆದ್ದರಿಂದ ಇಂತಹ ಪ್ರಕರಣಗಳಲ್ಲಿ ಉಪ ನೋಂದಣಾಧಿಕಾರಿಯನ್ನು ಅಮಾನತು ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಏಕೆಂದರೆ ಅವರು ಒಂದೇ ದಿನದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಾರೆ. ಹೀಗಾಗಿ ಅವರನ್ನು ಅಮಾನತ್ತು ಮಾಡುವ ಬದಲು ಈ ಸಮಸ್ಯೆಯ ಮೂಲವನ್ನು ಹುಡುಕಿ ಅದಕ್ಕೆ ಚಿಕಿತ್ಸೆ ನೀಡಬೇಕಿದೆ. ಇದೇ ಕಾರಣಕ್ಕೆ ವಿಧೇಯಕದಲ್ಲಿ ಮತ್ತೊಂದು ತಿದ್ದುಪಡಿಯನ್ನು ತರಲಾಗಿದೆ
2 ನೇ ತಿದ್ದುಪಡಿ ಏನು?
ಅದೇನೆಂದರೆ ಇನ್ನು ಮುಂದೆ ಇ-ಆಸ್ತಿ ಮೂಲಕ ಖಾತೆ ಆಗಿದ್ದರೆ ಮಾತ್ರ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೌಸಿಂಗ್ ಬೋರ್ಡ್ ಹಾಗೂ ಕಾವೇರಿ ಡೇಟಾಬೇಸ್‌ನಿಂದ ಅಸಲಿ ಖಾತಾ ಪರಿಶೀಲನೆ ನಡೆಸಿದ ನಂತರವೇ ನೋಂದಣಿ ಮುಂದುವರೆಯಲಿದೆ. ಆ ಮೂಲಕ ಇ-ಖಾತಾವನ್ನು ನೀಡಲಾಗುವುದು.
ಈ ವಿಧೇಯಕದಿಂದ ಸಕಾ೯ರದ ಬೊಕ್ಕಸಕ್ಕೆ ಅಥವಾ ಸಾವ೯ಜನಿಕರಿಗೆ ಆಗುವ ಆಥಿ೯ಕ ನಷ್ಟವನ್ನು ಕಡಿಮೆ ಮಾಡುವುದರೊಂದಿಗೆ ಅಕ್ರಮಗಳಿಗೂ ತಡೆಯೊಡ್ಡಿದಂತಾಗುತ್ತದೆ ಎಂದು ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.
ಒಟ್ಟಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಜನರಿಗೆ ಅಥವಾ ಕೆಲವೊಮ್ಮೆ ಅಧಿಕಾರಿಗಳ ಕತ೯ವ್ಯ ಲೋಪದಿಂದ ಸಕಾ೯ರಕ್ಕೆ ನಷ್ಟವುಂಟು ಮಾಡುವ ಅಕ್ರಮಗಳಿಗೆ ತಡೆಯೊಡ್ಡಲು ಉತ್ತಮ ಕ್ರಮ ಕೈಗೊಳ್ಳಲಾಗಿದ್ದು, ಆದಷ್ಟು ಬೇಗ ಇದು ಜಾರಿಗೊಂಡು ಸಾವ೯ಜನಿಕರಿಗೆ ಇದರ ಲಾಭ ದೊರಕಿದರೆ ಸಾಕು.
ಧನ್ಯವಾದಗಳು
****** ಅಂತ್ಯ ******
ರೈತರ ಸೇವೆಯಲ್ಲಿ ನಿಮ್ಮ vkkrushi.com 💚
ಪರಿಸರ ಪರಿಸರದೊಂದಿಗೆ ವಿಕೆ
ಆರ್ಥಿಕತೆ